ಕೆ ಇ ಎ ಸಹಾಯಕ ಪ್ರೊಫೇಸರ್ ಒಟ್ಟು 1242 ಹುದ್ದೆಗಳು
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. ಡಿಗ್ರಿ & ಸ್ನಾತಕೋತ್ತರ ಡಿಗ್ರಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)
ವಿದ್ಯಾರ್ಹತೆ:
ಈ ಹುದ್ದೆಗೆ ಯಾವುದೇ ಸ್ನಾತಕೋತ್ತರ ಡಿಗ್ರಿ ಪಾಸಾಗಿರಬೇಕು+(ನೆಟ್/ಸ್ಲೆಟ್/ಪಿ ಹೆಚ್ ಡಿ ಪಾಸಾಗಿರಬೇಕು)
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 22-40 ವರ್ಷದೊಳಗಿರಬೇಕು.
2ಎ,3ಎ,2ಬಿ,3ಬಿ 22-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 22-45 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ,2ಎ,3ಎ,2ಬಿ,3ಬಿ ಅಭ್ಯರ್ಥಿಗಳಿಗೆ 2000 ರೂ.ಗಳು
ಎಸ್ ಸಿ/ಎಸ್ ಟಿ/ಪ್ರ-1 ಅಭ್ಯರ್ಥಿಗಳಿಗೆ 1000 ರೂ.ಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:07-10-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06-11-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ