Land Surveyor Recruitment 2026

ಭೂ ಮಾಪನ ಕಂದಾಯ ವ್ಯವಸ್ಥೆ & ಭೂದಾಖಲೆಗಳ ಇಲಾಖೆ ಉಳಿಕೆ ವೃಂದ(ಆರ್ ಪಿ ಸಿ) & ಕಲ್ಯಾಣ ಕರ್ನಾಟಕ ವೃಂದದಲ್ಲಿ ಭೂಮಾಕರ ಹುದ್ದೆಗೆ  ಒಟ್ಟು  560+190 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.

(ಸ್ಪರ್ಧಾತ್ಮಕ ಪರೀಕ್ಷಾ ಮೂಲಕ ಆಯ್ಕೆ ಮಾಡಲಾಗುತ್ತದೆ)


ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ
2. ದ್ವಿತೀಯ ಪಿ ಯು ಸಿ/ಡಿಗ್ರಿ ಅಂಕಪಟ್ಟಿಗಳು
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)
6. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು ) 
7. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ
, ಕಲ್ಯಾಣ ಕರ್ನಾಟಕ, ಯೋಜನಾ ನಿರಾಶ್ರಿತ ಪ್ರಮಾಣ ಪತ್ರ)


ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ 

ಅಥವಾ

ಗಣಿತ/ ಭೌತಶಾಸ್ತ್ರ/ ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಇನ್ಸ್ಟ್ರುಮೆಂಟೇಷನ್/ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಕೃಷಿ ಬಿ ಎಸ್ ಸಿ ಪದವಿ ಪಡೆದಿರತಕ್ಕದ್ದು. 

ಅಥವಾ 

ಎ ಐ ಸಿ ಟಿ ಇ ಮಾನ್ಯತೆ ಪಡೆದ ಅಧಿಕೃತ ಸಂಸ್ಥೆಯಿಂದ ಇಂಜಿನಿಯರಿಂಗ್/ ತಂತ್ರಜ್ಞಾನದ ಯಾವುದೇ ವಿಭಾಗದಲ್ಲಿ ಡಿಪ್ಲೋಮಾ ಪಡೆದಿರತಕ್ಕದ್ದು


ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.

2/2ಬಿ/3/3ಬಿ 18-43 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು. 

 

ಅರ್ಜಿ ಶುಲ್ಕ:

ಸಾಮಾನ್ಯ, 2/2ಬಿ/3/3ಬಿ ಅಭ್ಯರ್ಥಿಗಳಿಗೆ 750 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ.ಗಳು

ಅಂಗವಿಕಲರಿಗೆ 250 ರೂ.ಗಳು


 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:11-07-2026

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-08-2026

ಶುಲ್ಕ ಪಾವತಿಸಲು ಕೊನೆಯ ದಿನಾಂಕ:21-08-2026


 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ. ಆರ್ ಪಿ ಸಿ
 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ. ಕೆ ಕೆ


Post a Comment

Previous Post Next Post